alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವೆ ಉಮಾಶ್ರೀ ಅಸ್ವಸ್ಥ : ಆಸ್ಪತ್ರೆಗೆ ದಾಖಲು

uma-s

ಬಾಗಲಕೋಟೆ: ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹುನಗುಂದದಲ್ಲಿ ಕಾಂಗ್ರೆಸ್ ಪಕ್ಷದಿಂದ ನೋಟ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಉಮಾಶ್ರೀ ಭಾಗವಹಿಸಿದ್ದರು.

ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಅವರು ವೇದಿಕೆ ಸಮೀಪಕ್ಕೆ ಬರುತ್ತಿದ್ದಂತೆ, ಬಳಲಿದಂತೆ ಕಂಡು ಬಂದಿದ್ದಾರೆ.

ಕೂಡಲೇ ಅವರನ್ನು ಹುನಗುಂದ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದು, ವೈದ್ಯಾಧಿಕಾರಿ ಡಾ. ಕುಸುಮಾ ಚಿಕಿತ್ಸೆ ನೀಡಿದ್ದಾರೆ.

ಶಾಸಕ ವಿಜಯಾನಂದ ಕಾಶಪ್ಪನವರ್ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಚಿಕಿತ್ಸೆ ಪಡೆದುಕೊಂಡ ಉಮಾಶ್ರೀ ಅವರು, ಸಂಜೆಯ ನಂತರ ಪ್ರಯಾಣ ಮುಂದುವರೆಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...