alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 4 ಮಂದಿ ಸಾವು

ಬಾಗಲಕೋಟೆ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ.

ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಂಕಜ್, ಶ್ರೀಕಾಂತಾಬಾಯಿ, ಪುಷ್ಪಾಬಾರದಕ್, ಉಮಾಬಾಯಿ ಮೃತಪಟ್ಟವರೆಂದು ಗುರುತಿಸಲಾಗಿದೆ. ದೀಪಕ್ ಬಾಹೆತಿ, ಸುನಿಲ್ ಸೋಮಾನಿ, ಶ್ರೀಧರ್ ದಾರಕ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಜಮಖಂಡಿ ಮೂಲದವರಾದ ಇವರೆಲ್ಲಾ ಸಂಬಂಧಿಕರಾಗಿದ್ದು, ಬಳ್ಳಾರಿಯ ದೇವಾಲಯಕ್ಕೆ ತೆರಳಿ ವಾಪಸ್ ಆಗುತ್ತಿದ್ದರು. ಹುನಗುಂದ ಪಟ್ಟಣದ ಸಾಯಿ ಮಂದಿರ ಬಳಿ ಸೊಲ್ಲಾಪುರ –ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳು ಹಾಗೂ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ನಡೆಸಲಾಗಿದೆ. ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...