alex Certify
ಕನ್ನಡ ದುನಿಯಾ       Mobile App
       

Kannada Duniya

ಗೃಹಿಣಿ ಅನುಮಾನಾಸ್ಪದ ಸಾವು: ಅತ್ತೆ –ಮಾವನಿಗೆ ಥಳಿಸಿದ ಸಂಬಂಧಿಕರು

ಬಾಗಲಕೋಟೆ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿರುವ ಸಂಬಂಧಿಕರು ಅತ್ತೆ, ಮಾವನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಬಾಗಲಕೋಟೆ ನವನಗರದ ನಿವಾಸಿ 26 ವರ್ಷದ ರೂಪಾ ಮಂಜುನಾಥ್ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿನ ಕುರಿತಾಗಿ ರೂಪಾ ಸಂಬಂಧಿಕರಿಗೆ ಅನುಮಾನ ವ್ಯಕ್ತವಾಗಿದೆ. ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ, ರೂಪಾ ಮನೆಯವರು ಆಕೆಯ ಅತ್ತೆ, ಮಾವನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...