alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿ ಮೋದಿಗೆ ತಿರುಗೇಟು ನೀಡಿದ ಸಿ.ಎಂ. ಸಿದ್ಧರಾಮಯ್ಯ

ಬಾಗಲಕೋಟೆ: ದಾವಣಗೆರೆಯಲ್ಲಿ ಬಿ.ಜೆ.ಪಿ. ಆಯೋಜಿಸಿದ್ದ ರೈತರ ಸಮಾವೇಶದಲ್ಲಿ ಇದು ಸೀದಾ ರುಪಯ್ಯಾ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಕ್ಕೆ ಸಿ.ಎಂ. ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಮೋದಿಯವರು ಸುಳ್ಳು ಹೇಳಲು ರಾಜ್ಯಕ್ಕೆ ಬರುತ್ತಿದ್ದಾರೆ. ಮೋದಿ ಮಹಾನ್ ಸುಳ್ಳುಗಾರ. ಅಂತಹವರನ್ನು ನಾನು ಎಲ್ಲಿಯೂ ನೋಡಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದಾರೆ. ಯಾರೂ ಏನು ಹೇಳಿದರೂ, ಏನೇ ನಾಟಕ ಮಾಡಿದರೂ ಅರ್ಥೈಸಿಕೊಳ್ಳುತ್ತಾರೆ. ಆ ಶಕ್ತಿ ರಾಜ್ಯದ ಜನರಿಗೆ ಇದೆ ಎಂದು ಹೇಳಿದ್ದಾರೆ.

ಕೊಟ್ಟ ಕುದುರೆಯನೇರದವರು ಈಗ ಮತ್ತೆ ಬಂದಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಅವರನ್ನು ಟೀಕಿಸಿದ ಸಿ.ಎಂ., ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಏನೂ ಮಾಡದೇ, ಈಗ ಚುನಾವಣೆಗಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...