alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೀತಿಗಾಗಿ ಮಾಡಬಾರದ ಕೆಲಸ ಮಾಡಿದ್ದಾಳೆ ಪುತ್ರಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕೆರೂರಿನಲ್ಲಿ 50 ವರ್ಷದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ತನಿಖೆ ಕೈಗೊಂಡ ಪೊಲೀಸರಿಂದ ಆಘಾತಕಾರಿ ಮಾಹಿತಿ ಬಯಲಾಗಿದೆ.

ಪ್ರಿಯಕರನೊಂದಿಗೆ ಸೇರಿ ಪುತ್ರಿಯೇ ತಾಯಿಯನ್ನು ಕೊಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರೂರು ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸಂಗವ್ವ ಎಂಬುವವರು ಅಕ್ಟೋಬರ್ 31 ರಂದು ಸಾವನ್ನಪ್ಪಿದ್ದು, ಸಂಬಂಧಿಕರು ಸಾವಿನ ಕುರಿತಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ. ಕೆರೂರು ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಗವ್ವನ ಪುತ್ರಿ ನರಗುಂದ ತಾಲ್ಲೂಕು ಶಿರೋಳದ ಯುವಕನೊಬ್ಬನನ್ನು ಪ್ರೀತಿಸಿದ್ದು, ಈ ವಿಚಾರ ಸಂಗವ್ವರಿಗೆ ಗೊತ್ತಾಗಿ ಬೈದಾಡಿದ್ದಾರೆ. ಕೆಲವು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಪುತ್ರಿಯನ್ನು ವಾಪಸ್ ಕರೆಸಿಕೊಂಡಿದ್ದಾರೆ. ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳದಂತೆ ತಾಕೀತು ಮಾಡಿದ್ದಾರೆ.

ಆದರೆ, ಮಗಳನ್ನು ಮದುವೆ ಮಾಡಿಕೊಡುವಂತೆ ತನ್ನ ಸೋದರಮಾವನೊಂದಿಗೆ ಬಂದಿದ್ದ ಪ್ರಿಯಕರ, ಸಂಗವ್ವ ಒಪ್ಪದಿದ್ದಾಗ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಇದಕ್ಕೆ ಪುತ್ರಿಯೂ ಸಾಥ್ ನೀಡಿದ್ದಾಳೆ.

ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ಈ ವಿಚಾರವೆಲ್ಲಾ ಬೆಳಕಿಗೆ ಬಂದಿದ್ದು, ಸಂಗವ್ವಳ ಪುತ್ರಿ, ಪ್ರಿಯಕರ ಮತ್ತು ಪ್ರಿಯಕರನ ಮಾವನನ್ನು ಬಂಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...