alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಡಹಗಲೇ ನಡೆದ ಕೃತ್ಯಕ್ಕೆ ಬೆಚ್ಚಿಬಿದ್ದ ಬಾಗಲಕೋಟೆ ಜನ

ಬಾಗಲಕೋಟೆ: ಹಾಡಹಗಲೇ ಮಹಿಳೆಯೊಬ್ಬರ ಕೈ ಕಾಲು ಕಟ್ಟಿ ಹಾಕಿ, ಹತ್ಯೆ ಮಾಡಿದ ದುಷ್ಕರ್ಮಿಗಳು, 1 ಲಕ್ಷ ರೂ. ದೋಚಿದ ಘಟನೆ ಬಾಗಲಕೋಟೆ ನವನಗರದ ವಾಂಬೆ ಕಾಲೋನಿಯಲ್ಲಿ ನಡೆದಿದೆ.

28 ವರ್ಷದ ರೂಪಾ ಹಳ್ಳದಮನಿ ಕೊಲೆಯಾದವರು. ಮಧ್ಯಾಹ್ನ ಮನೆಗೆ ನುಗ್ಗಿದ ದುಷ್ಕರ್ಮಿಗಳು ರೂಪಾ ಅವರನ್ನು ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದು, ಮನೆಯಲ್ಲಿಟ್ಟಿದ್ದ 1 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ.

4 ದಿನಗಳ ಹಿಂದಷ್ಟೇ ಅವರ ಪತಿ ಹಣವನ್ನು ತಂದು ಮನೆಯಲ್ಲಿಟ್ಟಿದ್ದರು. ಮಧ್ಯಾಹ್ನ ದುಷ್ಕರ್ಮಿಗಳು ಕೃತ್ಯವೆಸಗಿ ಪರಾರಿಯಾಗಿದ್ದು, ಬಾಗಲಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...