alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಡಿಯೋದಲ್ಲಿ ಬಯಲಾಯ್ತು ಕಾಮುಕನ ರಹಸ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಶಾಲಾ ಸಹಾಯಕನೊಬ್ಬ ಹೈಸ್ಕೂಲ್ ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ.

ಸಹಾಯಕ ಮತ್ತು ವಿದ್ಯಾರ್ಥಿನಿ ನಡುವೆ ನಡೆದ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಸಹಾಯಕ 8 ನೇ ತರಗತಿ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು, ಆಕೆಯನ್ನು ಪುಸಲಾಯಿಸಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.

ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಕಾಮುಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಾಮುಕ ತಪ್ಪೊಪ್ಪಿಗೆ ನೀಡಿ, ಕೆಲಸಕ್ಕೆ ರಾಜೀನಾಮೆ ಕೊಟ್ಟಿದ್ದಾನೆ.

ಬಾಲಕಿಯ ಭವಿಷ್ಯದ ಕಾರಣ, ಶಾಲೆ ಮತ್ತು ಗ್ರಾಮಕ್ಕೆ ಕೆಟ್ಟ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಪೊಲೀಸರಿಗೆ ದೂರು ನೀಡದೇ ಗ್ರಾಮಸ್ಥರು ಮತ್ತು ಆಡಳಿತ ಮಂಡಳಿಯವರು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಆಡಿಯೋ ವೈರಲ್ ಆಗಿದ್ದರಿಂದ ವಿಚಾರ ಎಲ್ಲೆಡೆ ಹರಿದಾಡಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...