alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೆ ಯತ್ನ: ಬಾಲಕಿ ಆತ್ಮಹತ್ಯೆ

ಬಾಗಲಕೋಟೆ: ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದರಿಂದ ಮನನೊಂದ ಬಾಲಕಿ, ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಚನಾಳದಲ್ಲಿ ನಡೆದಿದೆ.

16 ವರ್ಷದ ಬಾಲಕಿ ಮೇಲೆ ಅದೇ ಗ್ರಾಮದ 36 ವರ್ಷದ ಕಾಮುಕ, ಕುಡಿದ ಮತ್ತಿನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರಿಂದ ನೊಂದ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮಗಳ ಸಾವಿನಿಂದ ಆಕ್ರೋಶಗೊಂಡ ಬಾಲಕಿಯ ತಂದೆ, ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮುಧೋಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...