alex Certify
ಕನ್ನಡ ದುನಿಯಾ       Mobile App
       

Kannada Duniya

ಅನೈತಿಕ ಸಂಬಂಧದಿಂದ ಹೀಗಾಯ್ತು….

ಬಾಗಲಕೋಟೆ: ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ, ದೊಣ್ಣೆಯಿಂದ ಥಳಿಸಿ ಕ್ರೂರವಾಗಿ ಹತ್ಯೆ ಮಾಡಿದ ಘಟನೆ ಬಾದಾಮಿ ತಾಲ್ಲೂಕಿನ ನೆಲವಿಗಿ ಗ್ರಾಮದಲ್ಲಿ ನಡೆದಿದೆ.

36 ವರ್ಷದ ಮಲ್ಲಪ್ಪ ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಮಹಿಳೆಯೊಂದಿಗೆ ಮಲ್ಲಪ್ಪ ಅನೈತಿಕ ಸಂಬಂಧ ಹೊಂದಿದ್ದು, ಮಹಿಳೆಯ ಪತಿಯೊಂದಿಗೆ ಇದೇ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾನೆ.

2 ದಿನಗಳ ಹಿಂದೆ ಮಹಿಳೆಯ ಪತಿ ಮತ್ತು ಮಲ್ಲಪ್ಪ ನಡುವೆ ಮತ್ತೆ ಜಗಳವಾಗಿದ್ದು, ಇಂದು ಗ್ರಾಮದಲ್ಲಿನ ಮರವೊಂದಕ್ಕೆ ಮಲ್ಲಪ್ಪನನ್ನು ಕಟ್ಟಿ ಥಳಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಲ್ಲಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಲ್ಲಪ್ಪನ ಹತ್ಯೆಯಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...