alex Certify
ಕನ್ನಡ ದುನಿಯಾ       Mobile App
       

Kannada Duniya

ಹ್ಯಾರಿಸ್ ಪುತ್ರ ನಲಪಾಡ್ ಗೆ ಜಾಮೀನು

ಉದ್ಯಮಿ ಪುತ್ರ ವಿದ್ವತ್ ಎಂಬವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆದಿದ್ದು, ಈ ಘಟನೆ ನಡೆದ ಮೂರು ದಿನಗಳ ಬಳಿಕ ಬಂಧನಕ್ಕೊಳಗಾಗಿದ್ದ ಮೊಹಮ್ಮದ್ ನಲಪಾಡ್ 115 ದಿನಗಳಿಂದಲೂ ಪರಪ್ಪನ ಆಗ್ರಹಾರ ಕಾರಾಗೃಹದ ಪಾಲಾಗಿದ್ದರು.

ಇದೀಗ ವಿಚಾರಣೆ ಬಳಿಕ ಮೊಹಮ್ಮದ್ ನಲಪಾಡ್ ಹೈಕೋರ್ಟ್ ಜಾಮೀನು ನೀಡಿದ್ದು, ಇದಕ್ಕೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಎರಡು ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿದ್ದು, ಸಾಕ್ಷ್ಯ ನಾಶ ಮಾಡಬಾರದು, ಬೆಂಗಳೂರು ಬಿಟ್ಟು ತೆರಳಬಾರದು ಎಂಬುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...