alex Certify
ಕನ್ನಡ ದುನಿಯಾ       Mobile App
       

Kannada Duniya

ಎಂಪಿಎಂ ಉಳಿವಿಗೆ ಇಂದು ಭದ್ರಾವತಿ ಬಂದ್

bdvt

ಶಿವಮೊಗ್ಗ: ಸರ್ಕಾರಿ ಸ್ವಾಮ್ಯದ ಭದ್ರಾವತಿ ಎಂಪಿಎಂ ಪುನಶ್ಚೇತನಗೊಳಿಸಬೇಕು ಹಾಗೂ ಕಾರ್ಮಿಕರ ಹಿತಕಾಯಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಕರೆನೀಡಲಾಗಿರುವ ಬಂದ್ ಗೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭದ್ರಾವತಿಯಲ್ಲಿ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ.

ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭದ್ರಾವತಿ ಬಂದ್ ಗೆ ರೈತಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು, ಬಂದ್ ನಿಂದಾಗಿ ಶಾಲಾ- ಕಾಲೇಜು, ಕೆಲಸ ಕಾರ್ಯಗಳಿಗೆ ಹೋಗುವವರಿಗೆ ತೊಂದರೆಯಾಗಿತ್ತು. ಬೆಳಿಗ್ಗೆಯಿಂದಲೇ, ಎಂಪಿಎಂ ಕಾರ್ಮಿಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾರ್ಮಿಕರಿಗೆ ಕಡ್ಡಾಯ ರಜೆ ನೀಡಿದ್ದು, ಕಾರ್ಖಾನೆಯನ್ನು ಮುಚ್ಚಲು ಹುನ್ನಾರ ನಡೆದಿದೆ ಎಂದು ಆರೋಪಿಸಿ ಕಾರ್ಮಿಕರು, ಸುಮಾರು 120 ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ.

ಎಂಪಿಎಂ ಕಾರ್ಮಿಕರ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲಿಸಿವೆ. ಇಂದು ಬಂದ್ ಗೆ ಕರೆ ನೀಡಲಾಗಿತ್ತು. ಇದಕ್ಕೆ ಬೆಂಬಲ ವ್ಯಕ್ತವಾಗಿದ್ದು, ಬೆಳಿಗ್ಗೆಯಿಂದಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಹೊರವಲಯದ ಮೂಲಕ ಬಸ್, ವಾಹನಗಳು ಸಂಚರಿಸಿದವು. ಅಹಿತಕರ ಘಟನೆ ನಡೆಯದಂತೆ ಬಿಗಿಭದ್ರತೆ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...