alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ಮೈಸೂರು ಬಂದ್

mysore-protest

ಬಿಜೆಪಿ ಕಾರ್ಯಕರ್ತ ರಾಜು ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಇಂದು ಕರೆ ನೀಡಲಾಗಿರುವ ಮೈಸೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಬಂದ್ ಸಂದರ್ಭದಲ್ಲಿ ರಸ್ತೆಗಿಳಿದ ಕೆಲ ಸರ್ಕಾರಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಹಲವೆಡೆ ರಸ್ತೆ ತಡೆಯನ್ನೂ ನಡೆಸಲಾಗಿದೆ. ಪ್ರತಿಭಟನಾಕಾರರು ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ನಡೆಸಿ ಗಾಜುಗಳನ್ನು ಜಖಂಗೊಳಿಸಿದ್ದಾರೆ.

ಉದ್ರಿಕ್ತರ ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿರುವ ಘಟನೆಯೂ ನಡೆದಿದೆ. ಆರೋಪಿಗಳನ್ನು ಬಂಧಿಸುವವರೆಗೂ ಶವ ಸಂಸ್ಕಾರ ನಡೆಸುವುದಿಲ್ಲವೆಂದು ಪಟ್ಟು ಹಿಡಿದಿದ್ದು, ಅವರ ಮನವೊಲಿಸುವ ಕಾರ್ಯ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...