alex Certify
ಕನ್ನಡ ದುನಿಯಾ       Mobile App
       

Kannada Duniya

ಕೋಲಾರದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ

kolar-band

ಕೋಲಾರ: ರೈತರ ಸಾಲಮನ್ನಾ, ನೀರಾವರಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಿಗ್ಗೆ 5 ಗಂಟೆಯಿಂದಲೇ ವಿವಿಧ ಸಂಘಟನೆಗಳ ಕಾರ್ಯಕರ್ತರು ರಸ್ತೆಗಿಳಿದು ಹೋರಾಟ ನಡೆಸಿದ್ದಾರೆ. ಕೋಲಾರದಲ್ಲಿ ಬಸ್ ಸಂಚಾರಕ್ಕೆತಡೆಯೊಡ್ಡಿದ್ದಾರೆ.

ನಗರದ ಕೆಲವೆಡೆ ಸರ್ಕಲ್ ಗಳಲ್ಲಿ ಟೈಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರ ಬಂದ್ ಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ, ಕನ್ನಡಪರ, ದಲಿತರು, ಕಾರ್ಮಿಕರು ಮೊದಲಾದ ಸಂಘಟನೆಗಳು ಬೆಂಬಲ ನೀಡಿವೆ.

ಬಂದ್ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಬೆಳಿಗ್ಗೆಯಿಂದಲೇ ಹೋರಾಟಗಾರರು ವಾಹನ ಸಂಚಾರಕ್ಕೆ ತಡೆಯೊಡ್ಡಿದ್ದು, ಸಂಜೆಯವರೆಗೂ ವಾಹನ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...