alex Certify
ಕನ್ನಡ ದುನಿಯಾ       Mobile App
       

Kannada Duniya

2 ಜಿಲ್ಲೆಯಲ್ಲಿ ಶಾಲಾ –ಕಾಲೇಜಿಗೆ ರಜೆ

bnd-raje

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕನ್ನಡಪರ ಸಂಘಟನೆಗಳು ಜೂನ್ 12 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಮುಂಜಾಗ್ರತೆ ಕ್ರಮವಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೋಲಾರ ಬಂದ್ ಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ, ಕನ್ನಡಪರ, ದಲಿತರು, ಕಾರ್ಮಿಕರು ಮೊದಲಾದ ಸಂಘಟನೆಗಳು ಬೆಂಬಲ ನೀಡಿದ್ದು, ಬಂದ್ ಸಂಪೂರ್ಣ ಯಶಸ್ವಿಯಾಗುವ ಸಾಧ್ಯತೆ ಇದೆ.

ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ಲಕ್ಷಣ ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನಲಾಗಿದೆ. ಉಳಿದ ಕಡೆಗಳಲ್ಲಿ ಎಂದಿನಂತೆ ಶಾಲಾ, ಕಾಲೇಜುಗಳು ನಡೆಯಲಿವೆ.

ಉಳಿದ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಜಿಲ್ಲಾಧಿಕಾರಿಗಳು ರಜೆ ಘೋಷಿಸಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಪಿ.ಜಿ. 4 ನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...