alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರ ಕರ್ನಾಟಕ ಬಂದ್ –ಶಾಲೆಗಳಿಗೆ ರಜೆ

ಧಾರವಾಡ: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

ಧಾರವಾಡ, ಹುಬ್ಬಳ್ಳಿ, ನವಲಗುಂದ, ಗದಗ, ನರಗುಂದ, ಬೆಳಗಾವಿ, ಬಾಗಲಕೋಟೆಯ ಹಲವೆಡೆ ಬಂದ್ ಯಶಸ್ವಿಯಾಗಿದೆ. ಬೆಳಗಿನಜಾವದಿಂದಲೇ ಹೋರಾಟಗಾರರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಟ್ಯಾಂಕರ್ ಒಂದಕ್ಕೆ ಕಲ್ಲು ತೂರಾಟ ನಡೆಸಿದ್ದು, ಹಲವೆಡೆ ಟೈಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಂದ್ ಗೆ ಕರೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ವಿ.ಟಿ.ಯು. ಪರೀಕ್ಷೆಗಳನ್ನು ಮುಂದೂಡಲಾಗಿದೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಜನವರಿ 8 ಕ್ಕೆ ಮುಂದೂಡಿದ್ದು, ಡಿಸೆಂಬರ್ 28 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಡಿಸೆಂಬರ್ 29 ರಂದು ನಡೆಸಲಾಗುವುದು. ಡಿಸೆಂಬರ್ 27 ರಂದು ನಡೆಯಬೇಕಿದ್ದ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯನ್ನು ಡಿಸೆಂಬರ್ 31 ರಂದು ಭಾನುವಾರ ನಡೆಸಲಾಗುವುದು.

ಗದಗ ಜಿಲ್ಲೆಯ ನರಗುಂದ, ಗಜೇಂದ್ರಗಢ, ರೋಣ ಪಟ್ಟಣದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ತಾಲ್ಲೂಕುಗಳ ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗಳು ನಡೆಯಲಿವೆ. ಧಾರವಾಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿ.ಜೆ.ಪಿ. ಕಚೇರಿ ಬಳಿ ಕೊರೆಯುವ ಚಳಿಯನ್ನೂ ಲೆಕ್ಕಿಸದೇ 5 ದಿನಗಳಿಂದ ಹೋರಾಟ ನಡೆಸಲಾಗಿದೆ. ಇಂದು ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿ, ರಾಜ್ಯಪಾಲರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಮನವಿ ಸಲ್ಲಿಸುವುದಾಗಿ ಹೋರಾಟಗಾರರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...