alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಲ್ಲಿ ಮಹದಾಯಿ ಹೋರಾಟ ಸ್ಥಗಿತ

ಬೆಂಗಳೂರು: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಇಂದು ಕರೆ ನೀಡಲಾಗಿದ್ದ ಉತ್ತರ ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.

ರಾಜಧಾನಿಯಲ್ಲಿಯೂ ಕಳೆದ 5 ದಿನಗಳಿಂದ ಮಹದಾಯಿ ಹೋರಾಟ ನಡೆದಿದೆ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಹೋರಾಟವನ್ನು ಕೈ ಬಿಡಲು ಮುಖಂಡರು ತೀರ್ಮಾನಿಸಿದ್ದಾರೆ. ಬೆಂಗಳೂರಿನಲ್ಲಿ ಕೆ.ಪಿ.ಸಿ.ಸಿ. ಕಚೇರಿ, ರಾಜ್ಯಪಾಲರ ಕಚೇರಿ ಸೇರಿ ವಿವಿಧೆಡೆ ತೆರಳಿ ಮನವಿ ಸಲ್ಲಿಸಿದ ಹೋರಾಟಗಾರರು ಫಿಲ್ಮ್ ಚೇಂಬರ್ ಗೆ ಭೇಟಿ ನೀಡಿದ್ದಾರೆ.

ಮಹದಾಯಿ ಹೋರಾಟಕ್ಕೆ ಚಿತ್ರರಂಗ ಬೆಂಬಲ ನೀಡಿದೆ. ಇದರಿಂದ ನಮಗೆ ಹೆಚ್ಚಿನ ಬಲ ಬಂದಿದೆ ಎಂದು ಮಹದಾಯಿ ಹೋರಾಟಗಾರ ವೀರೇಶ್ ಸೊಬರದಮಠ ತಿಳಿಸಿದ್ದಾರೆ.

ಬೆಂಗಳೂರಿನ ಪ್ರತಿಭಟನೆಯನ್ನು ವಾಪಸ್ ಪಡೆಯುತ್ತೇವೆ. ಉತ್ತರ ಕರ್ನಾಟಕದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಇಂದು ಹೋರಾಟಗಾರರು ಬೆಂಗಳೂರಿನ ಪ್ರತಿಭಟನೆ ಕೈಬಿಟ್ಟು ಊರಿಗೆ ತೆರಳಲಿದ್ದಾರೆ. ಮುಖಂಡರು ನಾಳೆ ಹೊರಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...