alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಬಂದ್ ಹಿನ್ನಲೆ: ಪರೀಕ್ಷೆ ಮುಂದಕ್ಕೆ –ಕೆಲವೆಡೆ ಶಾಲೆಗಳಿಗೆ ರಜೆ

ಮಹದಾಯಿ ವಿಚಾರವಾಗಿ ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಬಂದ್ ಆಚರಣೆ ಹಿನ್ನಲೆಯಲ್ಲಿ ವಿ.ಟಿ.ಯು. ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಡಿಸೆಂಬರ್ 27 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಜನವರಿ 8 ಕ್ಕೆ ಮುಂದೂಡಿದ್ದು, ಡಿಸೆಂಬರ್ 28 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಡಿಸೆಂಬರ್ 29 ರಂದು ನಡೆಸಲಾಗುವುದು.

ನಾಳೆ ನಡೆಯಬೇಕಿದ್ದ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯನ್ನು ಡಿಸೆಂಬರ್ 31 ರಂದು ಭಾನುವಾರ ನಡೆಸಲಾಗುವುದು.

ಗದಗ ಜಿಲ್ಲೆಯ ನರಗುಂದ, ಗಜೇಂದ್ರಗಢ, ರೋಣ ಪಟ್ಟಣದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ತಾಲ್ಲೂಕುಗಳ ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗಳು ನಡೆಯಲಿವೆ.

ಧಾರವಾಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ, ಕಾಳೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಶಾಂತಿಯುತವಾಗಿ ಬಂದ್ ಆಚರಿಸುವಂತೆ ಗೃಹ ಸಚಿವರು ಮನವಿ ಮಾಡಿದ್ದಾರೆ.

ಬೆಳಗಾವಿ, ಗದಗ, ಹುಬ್ಬಳ್ಳಿ –ಧಾರವಾಡ, ಬಾಗಲಕೋಟೆ ಮೊದಲಾದ ಕಡೆಗಳಲ್ಲಿ ಮುಂಜಾಗ್ರತೆ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಹದಾಯಿಗಾಗಿ ನಡೆಯಲಿರುವ ನಾಳಿನ ಉತ್ತರ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...