alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಕ್ಯೂರಿಟಿ ಕೆಲಸ ನೀಡಲಿಲ್ಲವೆಂದು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಪದವೀಧರ

ಎಂಬಿಎ ಪದವೀಧರನೋರ್ವ ಉತ್ತಮ ವೇತನ ದೊರೆಯುತ್ತಿದ್ದ ಹುದ್ದೆ ತೊರೆದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಕೇಳಿಕೊಂಡು ಹೋಗಿದ್ದು, ಈ ಕೆಲಸ ತನಗೆ ಸಿಗಲಿಲ್ಲವೆಂಬ ಕಾರಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.

ವಿಮಾನ ನಿಲ್ದಾಣಕ್ಕೆ ಎರಡು ಬಾರಿ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ ಆದಿತ್ಯ ರಾವ್ ನನ್ನು ಪೊಲೀಸರು ಈಗ ಬಂಧಿಸಿದ್ದು, ವಿಚಾರಣೆ ವೇಳೆ ಅಚ್ಚರಿಯ ಸಂಗತಿಗಳು ಬಯಲಾಗಿವೆ.

ಕುಂದಾಪುರ ಮೂಲದ ಆದಿತ್ಯ ರಾವ್, ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಪ್ರತಿಷ್ಠಿತ ಬಹುರಾಷ್ಟ್ರೀಯ ಬ್ಯಾಂಕ್ ನಲ್ಲಿ ಉತ್ತಮ ಹುದ್ದೆಯಲ್ಲಿದ್ದು, ಎಸಿ ತನಗೆ ಆಗಿಬರುವುದಿಲ್ಲ ಹಾಗೂ ಸಮಯಕ್ಕೆ ಸರಿಯಾಗಿ ಊಟ ಮಾಡಬೇಕೆಂಬ ಕಾರಣಕ್ಕೆ ಈ ಹುದ್ದೆಗಳನ್ನು ತೊರೆದಿದ್ದನೆನ್ನಲಾಗಿದೆ.

ಬಳಿಕ ಈತ ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸಕ್ಕೆ ಸೇರಿದ್ದಾನೆ. ನಂತರ ಅದನ್ನೂ ಬಿಟ್ಟು ಉಡುಪಿಯ ಪುತ್ತಿಗೆ ಮಠದಲ್ಲಿ ಅಡಗೆ ಸಹಾಯಕನಾಗಿ ಕೆಲಸ ಮಾಡಿದ್ದಾನೆ.

ಇಷ್ಟೇ ಅಲ್ಲ, ಈ ಎಲ್ಲ ಕೆಲಸಗಳನ್ನು ಬಿಟ್ಟು ಬೆಂಗಳೂರಿಗೆ ಬಂದಿದ್ದ ಈತ ಲ್ಯಾಪ್ ಟಾಪ್ ಕಳವು ಸಹ ಮಾಡಿದ್ದಾನೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಕೇಳಿಕೊಂಡು ಹೋಗಿದ್ದು, ತನಗೆ ಸಿಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದನೆನ್ನಲಾಗಿದೆ. ಈಗ ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...