alex Certify
ಕನ್ನಡ ದುನಿಯಾ       Mobile App
       

Kannada Duniya

ಸರಗಳ್ಳತನಕ್ಕಿಳಿದಿದ್ದ ಬಿಬಿಎಂ ಪದವೀಧರ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

arrest-main

ವೇಶ್ಯೆಯರ ಸಹವಾಸಕ್ಕಾಗಿ ಬಿಬಿಎಂ ಪದವಿ ಪಡೆದವನೊಬ್ಬ ಸರಗಳ್ಳತನಕ್ಕಿಳಿದು ಪೊಲೀಸರ ಅತಿಥಿಯಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಹೌದು. ಮೂಲತಃ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯವನಾದ ಜೈಕುಮಾರ್ ಎಂಬ ಈ ಮಹಾನುಭಾವ ಬಿಬಿಎಂ ವ್ಯಾಸಂಗ ಮಾಡಿದ್ದು, ಐಬಿಎಂ ಕಂಪೆನಿಗೆ ಸೇರಿ ಕೆಲ ಕಾಲ ಕೆಲಸ ಮಾಡಿದ್ದ ಎನ್ನಲಾಗಿದೆ. ತದ ನಂತರ ತನ್ನ ಮೋಜಿನ ಜೀವನಕ್ಕಾಗಿ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದಿದ್ದ ಈತ ವೇಶ್ಯೆಯರ ಸಹವಾಸಕ್ಕಾಗಿ ಸರಗಳ್ಳತನ ಮಾಡುತ್ತಿದ್ದ. ಅಲ್ಲದೇ ಬೈಕ್‌ ಗಳನ್ನು ಕದ್ದು ಅದರ ನಂಬರ್ ಪ್ಲೇಟ್ ಬದಲಿಸಿ ನಿರ್ಜನ ಪ್ರದೇಶಗಳಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಎಗರಿಸುತ್ತಿದ್ದ ಎನ್ನಲಾಗಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ, ವಿಜಯನಗರ, ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ತನ್ನ ಕೃತ್ಯ ನಡೆಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ಕಳ್ಳನನ್ನು ವಶಕ್ಕೆ ಪಡೆದಿರುವ ಬಸವೇಶ್ವರ ನಗರ ಪೊಲೀಸರು, ಸುಮಾರು 35 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ 1.2 ಕೆ.ಜಿ. ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...