alex Certify
ಕನ್ನಡ ದುನಿಯಾ       Mobile App
       

Kannada Duniya

ನೈಸ್ ರಸ್ತೆಯಲ್ಲಿ ಕಾರು ಪಲ್ಟಿ: ಮೂವರ ದುರ್ಮರಣ

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ನೈಸ್ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಹರ್ಷಾ, ಶೃತಿ ಮತ್ತು ಆಶ್ರಯ ಮೃತರು. ಮೃತರೆಲ್ಲ ಆನೇಕಲ್ ಅಲಯನ್ಸ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.

ಕಾರಿನಲ್ಲಿ ಐವರು ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ. ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲನೆ ಮಾಡ್ತಿದ್ದ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...