alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಕುರಿತು ಭೂ ವಿಜ್ಞಾನಿಗಳು ಹೇಳಿದ್ದೇನು?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 2.30 ರಿಂದ 3 ಗಂಟೆ ನಡುವಿನ ಅವಧಿಯಲ್ಲಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಬಹಳಷ್ಟು ಮಂದಿ ಸಾರ್ವಜನಿಕರು ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದರು.

ಭೂಮಿ ಕಂಪಿಸಿದ ಅನುಭವದ ಜೊತೆಗೆ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದೆ ಎಂದು ತಿಳಿಸಿದ್ದು, ಇದರಿಂದ ಗಾಬರಿಗೊಳಗಾದ ಅನೇಕರು ತಮ್ಮ ಮನೆಯಿಂದ ಹೊರಗೋಡಿ ಬಂದಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಖ್ಯಾತ ಭೂ ವಿಜ್ಞಾನಿ ಪ್ರಕಾಶ್ ಅವರು, ಬೆಂಗಳೂರಿನಲ್ಲಿ ಯಾವುದೇ ಭೂಕಂಪನವಾಗಿಲ್ಲ. ಗಾಳಿಯ ಸ್ಥಾನಪಲ್ಲಟದಿಂದ ಸದ್ದು ಬಂದಿದೆ ಹೊರತು ಭೂಗರ್ಭದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ತಿಳಿಸಿದ್ದಾರೆ. ಜನತೆ ಈ ಕುರಿತು ಆತಂಕ ಪಡುವ ಅಗತ್ಯ ಇಲ್ಲವೆಂದು ಪ್ರಕಾಶ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...