alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ವಿಧಾನಸಭೆ ಚುನಾವಣೆ : ಮತದಾನದ ಅವಧಿ ವಿಸ್ತರಣೆ

ರಾಜ್ಯ ವಿಧಾನಸಭೆ ಚುನಾವಣಾ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಆಗ್ಲೇ ಚುನಾವಣೆ ಕಾವು ಏರುತ್ತಿದೆ. ರಾಷ್ಟ್ರ ನಾಯಕರು ರಾಜ್ಯಕ್ಕೆ ಬಂದು ಮತದಾರರ ಮನವೊಲಿಸುವ ಯತ್ನ ಶುರು ಮಾಡಿದ್ದಾರೆ. ರಾಜ್ಯ ರಾಜಕೀಯ ನಾಯಕರ ವಾದ-ಪ್ರತಿವಾದ ಕೂಡ ಶುರುವಾಗಿದೆ. ಈ ಮಧ್ಯೆ ಚುನಾವಣೆಗೆ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತಗಳೂ ತಯಾರಿ ಶುರುಮಾಡಿವೆ.

ಬೆಂಗಳೂರು ಜಿಲ್ಲಾಡಳಿತ ವಿಧಾನಸಭೆ ಚುನಾವಣೆಗೆ ಸಜ್ಜಾಗ್ತಿದೆ. ಈ ಬಗ್ಗೆ ಮಾತನಾಡಿದ ಬೆಂಗಳೂರು ಜಿಲ್ಲಾಧಿಕಾರಿ ವಿ.ಶಂಕರ್, ಮತದಾನದ ಅವಧಿಯನ್ನು ವಿಸ್ತರಿಸಿರುವುದಾಗಿ ಹೇಳಿದ್ದಾರೆ. ಈ ಹಿಂದೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯುತ್ತಿತ್ತು. ಆದ್ರೆ ಈ ಬಾರಿ ಬೆಳಿಗ್ಗೆ 7ರಿಂದ ಶುರುವಾಗುವ ಮತದಾನ ಸಂಜೆ 6ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಲಾಂಚನ ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿಗಳು ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. ಶಾಂತಿಯುತ ಮತದಾನಕ್ಕೆ ತಯಾರಿ ನಡೆಸುತ್ತಿದ್ದೇವೆ. ದಿವ್ಯಾಂಗರಿಗೆ ವಿಶೇಷ ವ್ಯವಸ್ಥೆ ಮಾಡಲಾಗ್ತಿದೆ. ಈ ಬಾರಿ 1 ಲಕ್ಷ 65 ಸಾವಿರ ಮತದಾರರ ಸೇರ್ಪಡೆಯಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಹಾಗೆ ಮತದಾನ ಬಹಿಷ್ಕಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...