alex Certify
ಕನ್ನಡ ದುನಿಯಾ       Mobile App
       

Kannada Duniya

ನಿರೀಕ್ಷೆಗೂ ಮೀರಿದ ಮಳೆಗೆ ಧರೆಗುರುಳಿದ್ದು 300 ಮರ

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ‌ನಿರೀಕ್ಷೆಗೂ‌ ಮೀರಿದ ಮಳೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ.‌ ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲು ವಲಯವಾರು ತಂಡಗಳು‌ ಕೆಲಸ‌ ಮಾಡುತ್ತಿವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಸ್ತೆ ಗುಂಡಿ ಮುಚ್ಚಲು ಹೈಕೋರ್ಟ್ ಆದೇಶ‌ ನೀಡಿದ್ದು, ಈ ಕೆಲಸವೂ ತ್ವರಿತವಾಗಿ ನಡೆಯುತ್ತಿದೆ. ಆದರೆ ಮಳೆಯಿಂದ ತೊಂದರೆಯಾಗುತ್ತಿದೆ. ರಾಜಕಾಲುವೆ ಒತ್ತುವರಿ ತೆರವಿಗೆ ಕಠಿಣ ಕ್ರಮ‌ಕೈಗೊಂಡಿದ್ದು, ಸರ್ವೆ ಮಾಡಲು ಸೂಚನೆ ನೀಡಲಾಗಿದೆ. ಸರ್ವೆ ಮಾಡುವವರ ಕೊರತೆಯಿಂದ ಕಂದಾಯ ಇಲಾಖೆಯಿಂದ ತಾತ್ಕಾಲಿಕವಾಗಿ ಸರ್ವೆ ಮಾಡುವವರನ್ನು ನೇಮಕ‌ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಮಧ್ಯೆ ರಾಜ್ಯ ರಾಜಧಾನಿಯಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದು, ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...