alex Certify
ಕನ್ನಡ ದುನಿಯಾ       Mobile App
       

Kannada Duniya

ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಉಚಿತ

basavaraj-r

ಧಾರವಾಡ: ರಾಜ್ಯದ ಪದವಿ ಕಾಲೇಜ್ ಗಳ 1.5 ಲಕ್ಷ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಭವನದಲ್ಲಿ ಏರ್ಪಡಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಗಳ ಗ್ರಂಥಪಾಲಕರ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಪದವಿ ಕಾಲೇಜ್ ಗಳಿಗೆ 2160 ಅಧ್ಯಾಪಕರಿಗೆ ಜೂನ್ ನಲ್ಲಿ ನೇಮಕಾತಿ ಪತ್ರ ನೀಡಲಾಗುವುದು ಎಂದು ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುವುದು. ವಿಶ್ವವಿದ್ಯಾಲಯಗಳ ಆಡಳಿತ, ನೇಮಕಾತಿಯಲ್ಲಿ ಪಾರದರ್ಶಕತೆ ತರಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರೊ. ಬಿ.ಜಿ. ಮೂಲಿಮನಿ, ಪ್ರೊ. ಎಸ್.ಕೆ. ಸೈದಾಪುರ, ಎನ್.ವಿ. ಸತ್ಯನಾರಾಯಣ್ ಮೊದಲಾದವರು ಇದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...