alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಸರ್ಕಾರದ ಭವಿಷ್ಯ ಕುರಿತು ಹೊರಟ್ಟಿ ಹೇಳಿದ್ದೇನು?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಸರ್ಕಾರದ ಆಯುಷ್ಯ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಸಚಿವ ಸ್ಥಾನ ವಂಚಿತ ಶಾಸಕರುಗಳು ಸರಣಿ ಸಭೆ ನಡೆಸಿದ್ದು, ಈ ಸರ್ಕಾರ ಅಲ್ಪಾಯುಷಿ ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದರು.

ಇದರ ಮಧ್ಯೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾರಂಭವೊಂದರಲ್ಲಿ ಮಾತನಾಡುವ ವೇಳೆ, ಇನ್ನೂ ಒಂದು ವರ್ಷಗಳ ಕಾಲ ತಮ್ಮನ್ನು ಯಾರು ಟಚ್ ಮಾಡಲಾಗುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯವರೆಗೂ ತಾವೇ ಮುಖ್ಯಮಂತ್ರಿ ಎಂದು ಹೇಳಿಕೊಂಡಿದ್ದರು.

ಹೀಗಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಆಯುಷ್ಯ ಇನ್ನೊಂದು ವರ್ಷ ಎಂಬ ಮಾತುಗಳು ಕೇಳಿ ಬರುತ್ತಿದ್ದ ಮಧ್ಯೆ ಜೆಡಿಎಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುವುದು ಅನುಮಾನ ಎಂದು ಹೇಳಿದ್ದಾರೆ.

ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೇಷರತ್ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಇದೀಗ ದಿನಕ್ಕೊಂದು ಬೇಡಿಕೆ ಇಡುತ್ತಿದೆ. ಹೀಗಾಗಿ ಸರ್ಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಇದು ಹೀಗೆ ಮುಂದುವರೆದರೆ ಸರ್ಕಾರ ಐದು ವರ್ಷ ಪೂರೈಸುವುದು ಕಷ್ಟವೆಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...