alex Certify
ಕನ್ನಡ ದುನಿಯಾ       Mobile App
       

Kannada Duniya

ದಾಖಲೆಯ 7ನೇ ಬಾರಿಗೆ ಜಯ ಗಳಿಸಿದ ಹೊರಟ್ಟಿ

hora

ಬೆಳಗಾವಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜೆ.ಡಿ.ಎಸ್.ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಭರ್ಜರಿ ಗೆಲುವು ಸಾಧಿಸುವುದರೊಂದಿಗೆ ಸತತ 7ನೇ ಬಾರಿಗೆ ಜಯಗಳಿಸಿದ್ದಾರೆ.

ದಾಖಲೆಯ 7,480 ಮತಗಳ ಅಂತರದಿಂದ ಬಸವರಾಜ ಹೊರಟ್ಟಿ ಜಯಗಳಿಸಿದ್ದು, ಸತತ 7ನೇ ಬಾರಿಗೆ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಮಹಾಂತೇಶ ಕೌಜಲಗಿ, ಎಂ.ಪಿ.ನಾಡಗೌಡ, ಅರುಣ ಶಹಾಪುರ ಮೊದಲಾದವರು ಕಣದಲ್ಲಿದ್ದರು. ಅವರೆಲ್ಲರಿಗಿಂತ ಹೆಚ್ಚು ಮತಗಳನ್ನು ಪಡೆದ ಬಸವರಾಜ ಹೊರಟ್ಟಿ ವಿಜೇತರಾಗಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.

ಬಸವರಾಜ ಹೊರಟ್ಟಿ ಜೆ.ಡಿ.ಎಸ್. ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ. ಜೆ.ಡಿ.ಎಸ್. ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಸವರಾಜ ಹೊರಟ್ಟಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...