alex Certify
ಕನ್ನಡ ದುನಿಯಾ       Mobile App
       

Kannada Duniya

BBMP ಯಲ್ಲಿ ಮೈತ್ರಿ ಮುಂದುವರಿಕೆಗೆ ‘ಕೈ’ ಕಸರತ್ತು

ಈ ಬಾರಿಯ ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಮೇಯರ್ ಸ್ಥಾನ ತಮ್ಮ ಪಕ್ಷಕ್ಕೆ ನೀಡಬೇಕೆಂದು ಪಟ್ಟು ಹಿಡಿದಿರುವ ಜೆಡಿಎಸ್ ನಾಯಕರ ಮನವೊಲಿಕೆಗೆ ‘ಕೈ’ ನಾಯಕರು ಮುಂದಾಗಿದ್ದಾರೆ.  ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಸಿಕೊಂಡು ಹೋಗುವ ಸಲುವಾಗಿ ಸಚಿವ ರಾಮಲಿಂಗಾರೆಡ್ಡಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ರಾಮಲಿಂಗಾರೆಡ್ಡಿ, ಸೆಪ್ಟೆಂಬರ್ 28 ರಂದು ನಡೆಯಲಿರುವ ಬಿಬಿಎಂಪಿ ಮೇಯರ್-ಉಪ ಮೇಯರ್ ಚುನಾವಣೆಯಲ್ಲಿ ಈ ಹಿಂದಿನಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಸುವ ಕುರಿತು ಮಾತುಕತೆ ನಡೆಸಿದ್ದಾರೆ.

ಮಾತುಕತೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಜಾತ್ಯಾತೀತ ಮನೋಭಾವ ಹೊಂದಿರುವ ದೇವೇಗೌಡರು, ಬೇರೆಯವರ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಮೇಯರ್-ಉಪ ಮೇಯರ್ ಚುನಾವಣೆಯಲ್ಲಿ ಎಂದಿನಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯುವ ವಿಶ್ವಾಸವಿದೆ ಎಂದಿದ್ದಾರೆ. ಈ ಮಧ್ಯೆ ಮೈತ್ರಿ ಕುರಿತಂತೆ ಮಾತುಕತೆಗೆ ಕುಪೇಂದ್ರ ರೆಡ್ಡಿಯವರಿಗೆ ದೇವೇಗೌಡರು ಜವಾಬ್ದಾರಿ ವಹಿಸಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...