alex Certify
ಕನ್ನಡ ದುನಿಯಾ       Mobile App
       

Kannada Duniya

ಜೆಡಿಎಸ್ ಬೆಂಬಲ ಕೋರಿದ ಕಾಂಗ್ರೆಸ್ ನಾಯಕರು

h d devegowdaಬೆಂಗಳೂರು ಮಹಾನಗರ ಪಾಲಿಕೆ ಮೇಯರ್- ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದ್ದು, ಈ ಬಾರಿಯೂ ಮೇಯರ್ ಹುದ್ದೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿ ಪಕ್ಷದ ನಾಯಕರು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ, ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ಮೊದಲಾದವರು ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ, ಎರಡನೇ ಅವಧಿಯಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಸುವ ಪ್ರಸ್ತಾವವನ್ನು ಇಟ್ಟಿದ್ದಾರೆನ್ನಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರೊಂದಿಗೆ ಚರ್ಚಿಸಿದ ಬಳಿಕವೇ ಮೈತ್ರಿ ಕುರಿತ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದಿದ್ದಾರೆನ್ನಲಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಮೇಯರ್- ಉಪ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಅವಶ್ಯಕವಾಗಿದ್ದು, ಜೆಡಿಎಸ್ ಯಾವ ಪಕ್ಷಕ್ಕೆ ಬೆಂಬಲ ನೀಡುತ್ತದೆಂಬುದು ಕುತೂಹಲ ಮೂಡಿಸಿದೆ. ಸೆಪ್ಟೆಂಬರ್ 19 ರಂದು ಮೇಯರ್- ಉಪ ಮೇಯರ್ ಚುನಾವಣೆ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...