alex Certify
ಕನ್ನಡ ದುನಿಯಾ       Mobile App
       

Kannada Duniya

ಗದ್ದಲದ ನಡುವೆಯೂ ಬಿಬಿಎಂಪಿ ಮೇಯರ್ ಆಯ್ಕೆ

padmavathiಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಇಂದು ನಡೆದಿದ್ದು, ನಿರೀಕ್ಷೆಯಂತೆಯೇ ಪ್ರಕಾಶ್ ನಗರ ವಾರ್ಡ್ ನ ಕಾಂಗ್ರೆಸ್ ಸದಸ್ಯೆ ಜಿ. ಪದ್ಮಾವತಿ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಕಳೆದ ಬಾರಿಯಂತೆಯೇ ಈ ಬಾರಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಏರ್ಪಟಿದ್ದು, ಮೇಯರ್ ಸ್ಥಾನ ಕಾಂಗ್ರೆಸ್ ಗೆ ಹಾಗೂ ಉಪ ಮೇಯರ್ ಸ್ಥಾನವನ್ನು ಜೆಡಿಎಸ್ ಗೆ ಎಂದು ತೀರ್ಮಾನವಾಗಿತ್ತು. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಜಿ. ಪದ್ಮಾವತಿ ಹಾಗೂ ಬಿಜೆಪಿಯ ಡಿ.ಹೆಚ್. ಲಕ್ಷ್ಮೀ ನಾಮಪತ್ರ ಸಲ್ಲಿಸಿದ್ದರು.

142 ಮತ ಗಳಿಸಿದ ಜಿ. ಪದ್ಮಾವತಿ ನೂತನ ಮೇಯರ್ ಆಗಿ ಆಯ್ಕೆಯಾದರು. ಚುನಾವಣೆ ಸಂದರ್ಭದಲ್ಲಿ ಇಬ್ಬರು ಬಿಜೆಪಿ ಸದಸ್ಯರು ತಡವಾಗಿ ಆಗಮಿಸಿದ ಕಾರಣ ಮತದಾನಕ್ಕೆ ಅವಕಾಶ ನಿರಾಕರಿಸಿದ ವೇಳೆ ಗದ್ದಲದ ವಾತಾವರಣ ಏರ್ಪಟ್ಟಿತ್ತು. ಪ್ರಾದೇಶಿಕ ಆಯುಕ್ತೆ ಜಯಂತಿಯವರ ತೀರ್ಮಾನವನ್ನು ವಿರೋಧಿಸಿ ಬಿಜೆಪಿ ಸದಸ್ಯರು ಉಪ ಮೇಯರ್ ಚುನಾವಣೆಗೂ ಮುನ್ನವೇ ಸಭೆಯಿಂದ ನಿರ್ಗಮಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...