alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಬಿಎಂಪಿ ನೂತನ ಮೇಯರ್ ಆಗಿ ಸಂಪತ್ ರಾಜ್ ಆಯ್ಕೆ

ಬೆಂಗಳೂರು ಮಹಾನಗರ ಪಾಲಿಕೆ ನೂತನ ಮೇಯರ್ ಆಯ್ಕೆ ಇಂದು ನಡೆಯಿತು. ಬಿಬಿಎಂಪಿಯ 51ನೇ ಮೇಯರ್ ಆಗಿ ಕಾಂಗ್ರೆಸ್ ನ ಸಂಪತ್ ರಾಜ್ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಪ್ರಾದೇಶಿಕ ಆಯುಕ್ತೆ ಜಯಂತಿ, ಸಂಪತ್ ಹೆಸರನ್ನು ಘೋಷಣೆ ಮಾಡಿದ್ದಾರೆ.

ನೂತನ ಮೇಯರ್ ಸಂಪತ್ ರಾಜ್ ದೇವರಜೀವನಹಳ್ಳಿ ವಾರ್ಡ್ ನ ಕಾರ್ಪೋರೇಟರ್. ಸಂಪತ್ ಎರಡು ಬಾರಿ ಬಿಬಿಎಂಪಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಮತದಾನ ಬಹಿಷ್ಕರಿಸಿ ಸದನದಿಂದ ಹೊರ ನಡೆದಿದ್ದಾರೆ. ಗಲಾಟೆ ಮಧ್ಯೆಯೇ ಮತದಾನ ನಡೆದಿದೆ. ಬಿಜೆಪಿ ಮತದಾನ ಬಹಿಷ್ಕರಿಸಿದ್ದರಿಂದ ಬಿಜೆಪಿ ಪರ ಅಭ್ಯರ್ಥಿ ಮುನಿಸ್ವಾಮಿಯವರು ಪರಾಭವಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಜಯಸಿಕ್ಕಿದೆ. ಉಪಮೇಯರ್ ಚುನಾವಣಾ ಪ್ರಕ್ರಿಯೆ ಈಗಷ್ಟೆ ಶುರುವಾಗಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...