alex Certify
ಕನ್ನಡ ದುನಿಯಾ       Mobile App
       

Kannada Duniya

ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು ಗೊತ್ತಾ..?

yash-ss

ಬೆಂಗಳೂರು: ಬೆಂಗಳೂರಿನಲ್ಲಿ ಗಿಡ, ಮರ ಉಳಿಸಿ ಬೆಳೆಸುವ ಉದ್ದೇಶದಿಂದ ಬಿ.ಬಿ.ಎಂ.ಪಿ. ಗ್ರೀನ್ ಆಪ್ ಯೋಜನೆ ಜಾರಿಗೆ ತರಲಾಗಿದೆ.

ಈ ಯೋಜನೆಗೆ ಚಾಲನೆ ನೀಡಿದ ನಟ ರಾಕಿಂಗ್ ಸ್ಟಾರ್ ಯಶ್, ಬೆಂಗಳೂರಿನಲ್ಲಿ ಹಸಿರು ಮಾಯವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬಿ.ಬಿ.ಎಂ.ಪಿ. ವತಿಯಿಂದ 10 ಲಕ್ಷ ಗಿಡ ಬೆಳೆಸಲು ಯೋಜನೆ ರೂಪಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಹೇಳಿದ್ದಾರೆ.

ಇಂತಹ ಸಾಮಾಜಿಕ ಕಾರ್ಯಕ್ಕೆ ಯಶ್ ಪ್ರತಿಷ್ಠಾನದಿಂದ 10 ಲಕ್ಷ ರೂ. ನೀಡುವ ಜೊತೆಗೆ ನಮ್ಮ ಕಾರ್ಯಕರ್ತರು ಶ್ರಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಗಿಡ, ಮರಗಳನ್ನು ಪೋಷಿಸಲು ಮುಂದಾಗಬೇಕು. ಹಸಿರೀಕರಣಕ್ಕೆ ಒತ್ತು ನೀಡಬೇಕೆಂದು ಅವರು ಸಲಹೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಮೇಯರ್ ಪದ್ಮಾವತಿ, ಆಯುಕ್ತ ಮಂಜುನಾಥ್ ಪ್ರಸಾದ್ ಮೊದಲಾದವರು ಇದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...