alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಸಿ. ಪಾಟೀಲ್ ಕಾರು ಅಡ್ಡಗಟ್ಟಿ ಪಕ್ಷಕ್ಕೆ ಆಹ್ವಾನಿಸಿದ ಬಿಜೆಪಿ ಕಾರ್ಯಕರ್ತರು…?

ಚಿತ್ರದುರ್ಗ: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ, ಸರ್ಕಾರ ಉರುಳಿಸುವ ಬಿಜೆಪಿ ಪ್ರಯತ್ನಗಳು ಮುಂದುವರೆದಿದ್ದು, ಕಾಂಗ್ರೆಸ್- ಜೆಡಿಎಸ್ ಶಾಸಕರನ್ನು ತಮ್ಮತ್ತ ಸೆಳೆಯಲು ಬಿಜೆಪಿ ನಾಯಕರು ಈಗ ಕಾರ್ಯಕರ್ತರನ್ನು ಮುಂದೆ ಬಿಟ್ಟಿದ್ದಾರೆಯೇ ಎಂಬ ಪ್ರಶ್ನೆ ಮನೆಮಾಡಿದೆ.

ಇದಕ್ಕೆ ಪುಷ್ಠಿ ಎಂಬಂತೆ ಬಿ.ಎಸ್. ಯಡಿಯೂರಪ್ಪನವರ ಅಭಿಮಾನಿಗಳು ಹಾಗೂ ಬಿಜೆಪಿ ಕೆಲ ಕಾರ್ಯಕರ್ತರು ಶಾಸಕ ಬಿ.ಸಿ. ಪಾಟೀಲ್ ಕಾರನ್ನು ತಡೆದು ಬಿಜೆಪಿಗೆ ಸೇರ್ಪಡೆಗೊಳ್ಳುವಂತೆ ಆಹ್ವಾನ ನೀಡಿದ್ದಾರೆ.

ಹೌದು, ಬಿಜೆಪಿ ನಾಯಕರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸುವ ನಿಟ್ಟಿನಲ್ಲಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಈಗ ತಮ್ಮ ಅಭಿಮಾನಿಗಳು, ಕಾರ್ಯಕರ್ತರನ್ನು ಮುಂದೆ ಬಿಡುವ ಮೂಲಕ ಸರ್ಕಾರದಲ್ಲಿನ ಶಾಸಕರನ್ನು, ಸಚಿವರನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಹೊಸ ತಂತ್ರಕ್ಕೆ ಮುಂದಾಗಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಚಿತ್ರದುರ್ಗದ ಸಿರಿಗೆರೆ ಗ್ರಾಮದಲ್ಲಿ ಕಾರ್ಯಕ್ರಮವನ್ನು ಮುಗಿಸಿ ಹೊರಟಿದ್ದ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಅವರ ಕಾರನ್ನು ಅಡ್ಡಗಟ್ಟಿದ ಬಿಜೆಪಿ ಕಾರ್ಯಕರ್ತರು, ಪಾಟೀಲ್ ಅವರನ್ನು ಬಿಜೆಪಿಗೆ ಸೇರ್ಪಡೆಯಾಗುವಂತೆ ಹಾಗೂ ಬಿ.ಎಸ್.ವೈ. ಅವರಿಗೆ ಬೆಂಬಲ ನೀಡುವಂತೆ ಒತ್ತಾಯಿಸಿದ್ದಾರೆ. ಇಷ್ಟಕ್ಕೆ ಬಿಡದ ಯಡಿಯೂರಪ್ಪ ಅಭಿಮಾನಿಗಳು ಬಿ.ಸಿ. ಪಾಟೀಲ್ ಅವರಿಗೆ ಬಿಜೆಪಿಗೆ ಸೇರಣ್ಣ ಎಂದು ಬೇಡಿಕೊಂಡಿದ್ದಾರೆ. ಅಲ್ಲದೇ ಇದೇ ವೇಳೆ ಯಡಿಯೂರಪ್ಪ ಹಾಗೂ ಬಿ.ಸಿ. ಪಾಟೀಲ್ ಅವರಿಗೆ ಜೈಕಾರಗಳನ್ನು ಹಾಕಿ ಘೋಷಣೆಗಳನ್ನು ಕೂಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...