alex Certify
ಕನ್ನಡ ದುನಿಯಾ       Mobile App
       

Kannada Duniya

ಪುಕ್ಕಟೆ ಬಿಯರ್ ಬಾಟಲಿಗಾಗಿ ಮುಗಿಬಿದ್ರು ಜನ

aac-ctd-sirasiಬಿಯರ್ ಸಾಗಿಸುತ್ತಿದ್ದ ಲಾರಿ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಲಾರಿ ಪಲ್ಟಿಯಾಗಿದ್ದು, ಬಿಯರ್ ಬಾಟಲಿ ಕೊಂಡೊಯ್ಯಲು ಜನ ಮುಗಿಬಿದ್ದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾದ ಘಟನೆ ತುಮಕೂರು ಜಿಲ್ಲೆಯ ನಂದಿಹಳ್ಳಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಈ ಅಪಘಾತ ನಡೆದಿದ್ದು, ಲಾರಿ ಪಲ್ಟಿಯಾದ ಪರಿಣಾಮ ರಸ್ತೆ ಮೇಲೆ ಬಿಯರ್ ಬಾಟಲಿಗಳು ಚೆಲ್ಲಾಪಿಲ್ಲಿಯಾಗಿ  ಬಿದ್ದಿವೆ. ಬಿಯರ್ ಬಾಟಲಿಗಳನ್ನು ಕೊಂಡೊಯ್ಯಲು ಹಲವರು ಮುಗಿಬಿದ್ದಿದ್ದು, ಇದರ ಪರಿಣಾಮ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.

ಬಿಯರ್ ಬಾಟಲಿ ತೆಗೆದುಕೊಂಡ ಹಲವರು ಅದನ್ನು ಅಲ್ಲಿಯೇ ಸೇವಿಸಿದರೆ, ಕೆಲ ಮಹಿಳೆಯರೂ ಕೂಡಾ ಬಿಯರ್ ಬಾಟಲಿ ಆಯ್ದುಕೊಳ್ಳಲು ಹಿಂದೆ ಬೀಳಲಿಲ್ಲ. ಹರಸಾಹಸಪಟ್ಟು ಜನರನ್ನು ನಿಯಂತ್ರಿಸಿದ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದ್ದು, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...