alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ವಿದೇಶಿಗರು

police

ಕೊಪ್ಪಳ: ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ, ಮೋಜು, ಮಸ್ತಿ ಮಾಡುತ್ತಿದ್ದ ವಿದೇಶಿಗರನ್ನು ತೆರವುಗೊಳಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹನುಮನಹಳ್ಳಿ ಮೀಸಲು ಅರಣ್ಯದಲ್ಲಿ ಕೆಲವು ದಿನಗಳಿಂದ ವಿದೇಶಿಗರು ಅಕ್ರಮವಾಗಿ ಬೀಡು ಬಿಟ್ಟಿದ್ದಾರೆ.

ಈ ಪ್ರದೇಶದಲ್ಲಿ ಪ್ರತಿದಿನ ವಿದೇಶಿಗರು ವಾಸ್ತವ್ಯ ಬದಲಿಸುತ್ತ, ಮೋಜು, ಮಸ್ತಿ ಮಾಡುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ.

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ, ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು, ತೆರವುಗೊಳಿಸಲು ಹೋಗಿದ್ದ ಸಂದರ್ಭದಲ್ಲಿ ವಿದೇಶಿಗರು ಹಲ್ಲೆ ಮಾಡಿದ್ದಾರೆ.

ಹಲ್ಲೆ ಮಾಡಿದ ಮೂವರು ವಿದೇಶಿಗರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...