alex Certify
ಕನ್ನಡ ದುನಿಯಾ       Mobile App
       

Kannada Duniya

ಮದ್ಯದ ಅಮಲಲ್ಲಿ ಉತ್ತರ ಭಾರತ ಯುವತಿಯರ ಅನುಚಿತ ವರ್ತನೆ

ಬೆಂಗಳೂರು: ಮದ್ಯದ ಅಮಲಿನಲ್ಲಿ ಉತ್ತರ ಭಾರತದ ಯುವತಿಯರು ರಂಪಾಟ ನಡೆಸಿದ ಘಟನೆ ಬೆಂಗಳೂರಿನ ನಾಗರಬಾವಿಯಲ್ಲಿ ನಡೆದಿದೆ.

ಕಾರು ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ವ್ಯಕ್ತಿ ಮೇಲೆ ಉತ್ತರ ಭಾರತ ಯುವತಿಯರು ಹಲ್ಲೆ ಮಾಡಿದ್ದು, ಆಗ ಸ್ಥಳೀಯರು, ಯುವತಿಯರು ಮತ್ತು ಅವರೊಂದಿಗೆ ಇದ್ದ ಯುವಕರನ್ನು ಹಿಡಿದುಕೊಂಡಿದ್ದಾರೆ.

ಯುವತಿಯರು ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದ್ದು, ಪ್ರಶ್ನಿಸಿದ ವ್ಯಕ್ತಿಯೊಂದಿಗೆ ಜಗಳವಾಡಿ ಹಲ್ಲೆ ಮಾಡಿದ್ದಾರೆ. ಅಲ್ಲದೇ, ತಮ್ಮ ಸ್ನೇಹಿತರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಜಗಳ ಜೋರಾಗಿದ್ದರಿಂದ ಸ್ಥಳೀಯರು ಮಧ್ಯಪ್ರವೇಶಿಸಿದ್ದಾರೆ.

ಯುವಕರು, ಯುವತಿಯರನ್ನು ಹಿಡಿದು, ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮದ್ಯದ ನಶೆಯಲ್ಲಿದ್ದ ಯುವತಿಯರು ಹಾಗೂ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...