alex Certify
ಕನ್ನಡ ದುನಿಯಾ       Mobile App
       

Kannada Duniya

ಮಗು ಸಾವಿಗೆ ಆಕ್ರೋಶ : ವೈದ್ಯನಿಗೆ ಥಳಿತ

polic-maluru

ಕೋಲಾರ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 2 ತಿಂಗಳ ಮಗು, ಸಾವನ್ನಪ್ಪಿದ್ದರಿಂದ ಆಕ್ರೋಶಗೊಂಡ ಪೋಷಕರು, ಸಂಬಂಧಿಕರು ವೈದ್ಯನನ್ನು ಮನಬಂದಂತೆ ಥಳಿಸಿದ್ದಾರೆ.

ಕೋಲಾರ ಜಿಲ್ಲೆ ಮಾಲೂರಿನ ಹೊಸೂರು ರಸ್ತೆಯ ಮಕ್ಕಳ ಆಸ್ಪತ್ರೆಯ ವೈದ್ಯ ಡಾ. ರಮೇಶ್ ಹಲ್ಲೆಗೊಳಗಾದವರು.

ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ಮಗುವನ್ನು ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದ್ದರಿಂದ ಆಕ್ರೋಶಗೊಂಡ ಸಂಬಂಧಿಕರು ಹಲ್ಲೆ ಮಾಡಿದ್ದು, ರಮೇಶ್ ಅವರ ಹಲ್ಲುಗಳು ಮುರಿದಿವೆ ಎನ್ನಲಾಗಿದೆ.

ಮಾಲೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...