alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಪರ ಘೋಷಣೆ: ಐವರ ಮೇಲೆ ಹಲ್ಲೆ

ckm-crik

ಚಿಕ್ಕಮಗಳೂರು: ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಜಯಗಳಿಸಿದ ಹಿನ್ನಲೆಯಲ್ಲಿ ಚಿಕ್ಕಮಗಳೂರಿನ ಆಲ್ದೂರಿನಲ್ಲಿ ಪಾಕ್ ಜಿತೇಗಾ ಎಂದು ಘೋಷಣೆ ಕೂಗಲಾಗಿದೆ.

ರಾತ್ರಿ ಪಾಕ್ ಪಂದ್ಯ ಜಯಿಸುತ್ತಿದ್ದಂತೆ ಕಾರಿನಲ್ಲಿ ಬಂದ ಐವರು ಪಾಕ್ ಪರ ಘೋಷಣೆ ಕೂಗಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಕಾರಿನಲ್ಲಿದ್ದ ಐವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಮೊದಲೇ ಟೀಂ ಇಂಡಿಯಾ ಸೋಲಿನಿಂದ ಆಕ್ರೋಶಗೊಂಡಿದ್ದ ಸ್ಥಳೀಯರು, ಪಾಕ್ ಪರ ಘೋಷಣೆ ಕೂಗಿದವರನ್ನು ಥಳಿಸಿ, ಅವರು ಬಂದಿದ್ದ ಕಾರ್ ಜಖಂಗೊಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...