alex Certify
ಕನ್ನಡ ದುನಿಯಾ       Mobile App
       

Kannada Duniya

ಮತದಾನಕ್ಕೂ ಮುನ್ನ ಗೋ ಪೂಜೆ ಮಾಡಿದ ಶ್ರೀರಾಮುಲು

ಬಾದಾಮಿ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಂಸದ ಬಿ. ಶ್ರೀರಾಮುಲು ಇಂದು ಮತದಾನಕ್ಕೂ ಮುನ್ನ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದ್ದಾರೆ.

ಬಳ್ಳಾರಿಯ ತಮ್ಮ ನಿವಾಸದಲ್ಲಿ ಕೇಸರಿ ವಸ್ತ್ರ ಧರಿಸಿ ಗೋ ಪೂಜೆ ನೆರವೇರಿಸಿದ ಶ್ರೀರಾಮುಲು ಬಳಿಕ ಕುಟುಂಬ ಸದಸ್ಯರೊಂದಿಗೆ ತೆರಳಿ ತಮ್ಮ ಮತ ಚಲಾಯಿಸಿದ್ದಾರೆ.

ಪ್ರತಿಷ್ಟಿತ ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಕಣಕ್ಕಿಳಿದಿರುವ ಶ್ರೀರಾಮುಲು, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲೂ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶ್ರೀರಾಮುಲು ಉಪ ಮುಖ್ಯಮಂತ್ರಿಯಾಗಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದ್ದು, ಮೇ 15 ರ ಫಲಿತಾಂಶದ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...