alex Certify
ಕನ್ನಡ ದುನಿಯಾ       Mobile App
       

Kannada Duniya

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ದೇಗುಲಹಳ್ಳಿ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಮೂಲದ ರಘುನಾಥ್(26), ಹುಣಸೂರು ತಾಲ್ಲೂಕು ಬಿಳಿಕೆರೆಯ ಸುದೀಂದ್ರ ಗೌಡ(25), ಮಂಡ್ಯದ ಮಲ್ಲಿಕಾರ್ಜುನ(26) ಮೃತಪಟ್ಟವರೆಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಭದ್ರಾವತಿಯ ಅಮಿತ್, ಚಾಲಕ ಮೊಹಮ್ಮದ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ದೇಗುಲಹಳ್ಳಿ ಬಳಿ ವೇಗವಾಗಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...