alex Certify BIG NEWS: ಭೀಕರ ಅಪಘಾತದಲ್ಲಿ 7 ಮಂದಿ ಕೂಲಿ ಕಾರ್ಮಿಕರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತದಲ್ಲಿ 7 ಮಂದಿ ಕೂಲಿ ಕಾರ್ಮಿಕರ ಸಾವು

ಬೆಳಗಾವಿ: ಬೊಲೆರೋ ವಾಹನ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲೇ 5 ಮಂದಿ ಸಾವನ್ನಪ್ಪಿದ್ದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು ಕೂಲಿ ಕಾರ್ಮಿಕರಾಗಿದ್ದು ಹೊಲದಲ್ಲಿ ಕೆಲಸ ಮುಗಿಸಿಕೊಂಡು ಬೊಲೆರೋದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...