alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ದೇಹದಿಂದ ಬೇರ್ಪಟ್ಟ ತಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಕಾಕತಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯ ತಲೆ ದೇಹದಿಂದ ಬೇರ್ಪಟ್ಟು ರಸ್ತೆಗೆ ಬಿದ್ದಿದೆ.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚರಿಸುತ್ತಿದ್ದ ಲಾರಿಯ ಡೀಸೆಲ್ ಖಾಲಿಯಾಗಿದ್ದು, ಚಾಲಕ ಟ್ಯಾಂಕ್ ಬಳಿ ಡೀಸೆಲ್ ಖಾಲಿಯಾಗಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಅತಿ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಡೀಸೆಲ್ ಟ್ಯಾಂಕ್ ಬಳಿ ನಿಂತಿದ್ದ ಚಾಲಕನ ದೇಹದಿಂದ ತಲೆ ಬೇರ್ಪಟ್ಟಿದೆ. ಭಯಾನಕ ದೃಶ್ಯವನ್ನು ಕಂಡವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾಕತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...