alex Certify
ಕನ್ನಡ ದುನಿಯಾ       Mobile App
       

Kannada Duniya

ಗೆಲುವಿಗೆ ಅಮಿತ್ ಶಾ ಪ್ಲಾನ್ ಏನು ಗೊತ್ತಾ…?

2 ದಿನಗಳ ಹಿಂದಷ್ಟೇ ಮೈಸೂರು ಭಾಗದಲ್ಲಿ ಪ್ರವಾಸ ನಡೆಸಿದ್ದ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ, ಇಂದಿನಿಂದ ಮತ್ತೆ ಗೆಲುವಿಗಾಗಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಗಾವಿ, ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಂಬೈ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಅಮಿತ್ ಶಾ ಬಿಡುವಿಲ್ಲದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 9.30 ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಕಿತ್ತೂರು ರಾಣಿ ಚೆನ್ನಮ್ಮನ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.

ನಂತರ ನಂದಗಡದ ಸಂಗೊಳ್ಳಿ ರಾಯಣ್ಣ ಸ್ಮಾರಕಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ ಕೆ.ಎಲ್.ಇ. ಕಾಲೇಜ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸುವರು. ಚಿಕ್ಕೋಡಿಯಲ್ಲಿ ಜೈನ ಸಮುದಾಯದ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ. ನಿಪ್ಪಾಣಿಯಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಗೋಕಾಕ್ ನಲ್ಲಿ ರೋಡ್ ಶೋ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...