alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ನಲ್ಲೇ ಕೈ ಹಾಕಿದ ಕಾಮುಕ

ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕಿನ ಮೂಡಲಗಿ ಪಟ್ಟಣದಲ್ಲಿ, ಕಾಮುಕನೊಬ್ಬ ಬಸ್ ನಲ್ಲಿಯೇ ಮಹಿಳಾ ಪ್ರಯಾಣಿಕರೊಬ್ಬರ ಕೈ ಹಿಡಿದೆಳೆದು ಕಿರುಕುಳ ನೀಡಿದ್ದಾನೆ.

ತುಕಾರಾಂ ಎಂಬಾತನೇ ಇಂತಹ ಕೃತ್ಯ ಎಸಗಿದವ. ವಿಜಯಪುರದಿಂದ ಗೋಕಾಕ್ ಗೆ ತೆರಳುತ್ತಿದ್ದ ಬಸ್ ನಲ್ಲಿ ತುಕಾರಾಂ ಪಕ್ಕದಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಕೈ ಹಿಡಿದೆಳೆದು ಕಿರುಕುಳ ನೀಡಿದ್ದಾನೆ.

ಇದನ್ನು ಗಮನಿಸಿದ ಸಹ ಪ್ರಯಾಣಿಕರು ಹಿಗ್ಗಾಮುಗ್ಗಾ ಥಳಿಸಿ, ಮೂಡಲಗಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ತುಕಾರಾಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ತುಕಾರಂ ಬಸ್ ಗಳಲ್ಲಿ ಒಂಟಿಯಾಗಿ ಪ್ರಯಾಣಿಸುವ ಮಹಿಳೆಯರಿಗೆ ಹಲವು ಸಲ ಕಿರುಕುಳ ನೀಡಿದ್ದನೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...