alex Certify
ಕನ್ನಡ ದುನಿಯಾ       Mobile App
       

Kannada Duniya

ಕೌಟುಂಬಿಕ ಕಲಹಕ್ಕೆ ದಂಪತಿ ಬಲಿ

ಬೆಳಗಾವಿ: ಕೌಟುಂಬಿಕ ಕಲಹದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಯಲಗೂಡ ತಾಂಡಾದ ರವಿ ರಾಥೋಡ್(25) ಅಂಜಲಿ(21) ಆತ್ಮಹತ್ಯೆ ಮಾಡಿಕೊಂಡವರು.

ಕಳೆದ ವರ್ಷ ಮದುವೆಯಾಗಿದ್ದ ದಂಪತಿ ಬದುಕು ಕಟ್ಟಿಕೊಳ್ಳುವ ಉದ್ದೇಶದಿಂದ ಬೆಳಗಾವಿಯ ಗೋಡಂಬಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ದಂಪತಿ ನಡುವೆ ಜಗಳವಾಗಿದ್ದು, ರವಿ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಅಂಜಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿಯ ಸಾವಿನಿಂದ ನೊಂದ ರವಿ ಕೂಡ ಜಮೀನೊಂದರಲ್ಲಿದ್ದ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...