alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿಯ ಫೋಟೋ ಪಡೆದು ಬ್ಲಾಕ್ ಮೇಲ್

ಬೆಳಗಾವಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಯುವತಿಯರನ್ನು ಪರಿಚಯಿಸಿಕೊಂಡು, ಪ್ರೀತಿಸುವ ನಾಟಕವಾಡಿ ವಂಚಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಸಮೀಪದ ಕೆ.ಕೆ. ಕೊಪ್ಪದ ಮಹೇಶ್ ಬಂಧಿತ ಆರೋಪಿ. ಯುವತಿಯರನ್ನು ಪರಿಚಯಿಸಿಕೊಂಡು ಅವರಿಗೆ ಹಣ ಕೊಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದ. ಹಣ ಕೊಡದಿದ್ದರೆ, ಖಾಸಗಿ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿದ್ದಾನೆ.

ಈತನಿಂದ ವಂಚನೆಗೆ ಒಳಗಾದ ಬ್ಯಾಂಕ್ ಉದ್ಯೋಗಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದು ಗೊತ್ತಾಗಿ ಯುವತಿಯೊಬ್ಬರು ಕೂಡ ದೂರು ನೀಡಿದ್ದು, ಬೆತ್ತಲೆ ಫೋಟೋ ಪಡೆದು ವಂಚಿಸಿದ್ದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.

ಮಾಳಮಾರುತಿ ಠಾಣೆ ಪೊಲೀಸರು ಮಹೇಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...