alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರ್ದೆಸೆಗೆ ಹೋದಾಗಲೇ ನಡೆದಿದೆ ಆಘಾತಕಾರಿ ಕೃತ್ಯ

ಬೆಳಗಾವಿ: ಜಾತ್ರೆಗೆ ಬಂದಿದ್ದ ಇಬ್ಬರು ಭಕ್ತರ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ದರೋಡೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಕೊಕಟನೂರ ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರದ ಕೊಲ್ಹಾಪುರ ನಿವಾಸಿಗಳಾದ ಸತೀಶ್ ಪಾಟೀಲ, ಪ್ರಣವ್ ಸ್ವಾಮಿ ಗಾಯಗೊಂಡಿದ್ದು, ಅವರನ್ನು ಅಥಣಿ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.

ಜಾತ್ರೆಗೆ ಬಂದಿದ್ದ ಇವರು ತಡರಾತ್ರಿ ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ 20 ಕ್ಕೂ ಅಧಿಕ ಮಂದಿ ಇದ್ದ ತಂಡ ದಾಳಿ ನಡೆಸಿದೆ. ದುಷ್ಕರ್ಮಿಗಳು ಇಬ್ಬರನ್ನೂ ಥಳಿಸಿ ಚಾಕುವಿನಿಂದ ಇರಿದು, ಹಣ, ಮೊಬೈಲ್ ಚಿನ್ನಾಭರಣ ಕಸಿದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಐಗಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...