alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳಗಾವಿ ಪಾಲಿಕೆ ಎದುರು ಕನ್ನಡ ಧ್ವಜಾರೋಹಣ

ಬೆಳಗಾವಿ: ರಾಜ್ಯೋತ್ಸವದ ಅಂಗವಾಗಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದ್ದಾರೆ.

ಮೊದಲ ಬಾರಿಗೆ ಕರ್ನಾಟಕ ಕ್ರಾಂತಿ ಪಡೆ ಕಾರ್ಯಕರ್ತರು ಧ್ವಜ ಹಾರಿಸಿದ್ದು, ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಧ್ವಜ ತೆರವುಗೊಳಿಸಿದ್ದಾರೆ.

ಕನ್ನಡ ಸಂಘಟನೆಯ ಕಾರ್ಯಕರ್ತರು ಬೆಳಗಿನ ಜಾವ ಧ್ವಜಾರೋಹಣ ಮಾಡಿ ಭುವನೇಶ್ವರಿ ಫೋಟೋ ಇಟ್ಟು ಪೂಜಿಸಿದ್ದಾರೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಧ್ವಜ ತೆರವುಗೊಳಿಸುವಂತೆ ಸೂಚಿಸಿದ್ದು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಕನ್ನಡ ಧ್ವಜ ಹಾರಿಸಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಧ್ವಜ ತೆರವುಗೊಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...