alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಧಾನದ ಬಳಿಕ ಸಿಎಂ ಸಭೆಗೆ ಹಾಜರಾಗಲು ಒಪ್ಪಿಕೊಂಡ ರೈತರು

ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಪಾವತಿಗೆ ಆಗ್ರಹಿಸಿ ಹಾಗೂ ಪ್ರಸಕ್ತ ಸಾಲಿನಲ್ಲಿ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿದ್ದ ಹೋರಾಟ ಒಂದು ಹಂತದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತ್ತಾದರೂ ಇದೀಗ ಸಂಧಾನ ಯಶಸ್ವಿಯಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಬೆಳಗಾವಿಗೆ ಬರಬೇಕೆಂದು ಪಟ್ಟು ಹಿಡಿದಿದ್ದ ಕಬ್ಬು ಬೆಳೆಗಾರರು, ಇದೀಗ ನವೆಂಬರ್ 20ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದಾರೆ.

ಡಿಸಿಪಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವೇಳೆ ರೈತರ ಮೇಲಿನ ಮೊಕದ್ದಮೆಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದ್ದು, ಹಿರೇಬಾಗೆವಾಡಿ ಪೊಲೀಸರ ವಶದಲ್ಲಿದ್ದ 10 ಮಂದಿ ರೈತರನ್ನು ಬಿಡುಗಡೆ ಮಾಡಲಾಗಿದೆ. ಈ ಸಭೆಯ ಬಳಿಕ ಕಬ್ಬು ಬೆಳೆಗಾರ ರೈತರು, ಮುಖ್ಯಮಂತ್ರಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ತೀರ್ಮಾನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...