alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆಯಾಗಲು ಬಂದು ಪರಾರಿಯಾದ ವರ

marriage

ಬೆಳಗಾವಿ: ಮದುವೆಯಾಗಲು ಬಂದಿದ್ದ ವರ ಪರಾರಿಯಾದ ಘಟನೆ ಬೆಳಗಾವಿಯ ವಿವಾಹ ನೋಂದಣಿ ಕಚೇರಿಯಲ್ಲಿ ನಡೆದಿದೆ.

ಪ್ರೀತಿಸಿದ ಯುವ ಜೋಡಿಯೊಂದು ಮದುವೆಯಾಗಲು ವಿವಾಹ ನೋಂದಣಿ ಕಚೇರಿಗೆ ಬಂದ ಸಂದರ್ಭದಲ್ಲಿ ಯುವತಿಯ ಪೋಷಕರು ರಂಪಾಟ ಮಾಡಿದ್ದಾರೆ.

ಇದರಿಂದ ಬೆದರಿದ ಯುವಕ ಅಲ್ಲಿಂದ ಪರಾರಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಯುವತಿ ಜೊತೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಪೋಷಕರು ಹರಿಹಾಯ್ದಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಮಾರ್ಕೇಟ್ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಯುವಕ, ಯುವತಿ ವರ್ಷಗಳಿಂದ ಪ್ರೀತಿಸಿದ್ದು, ಮದುವೆಯಾಗಲು ನಿರ್ಧರಿಸಿ, ಯುವತಿ ಮನೆ ಬಿಟ್ಟು ಬಂದಿದ್ದಾಳೆ. ಆಕೆಯ ಪೋಷಕರು ಮಾರ್ಕೇಟ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಇಬ್ಬರೂ ವಯಸ್ಕರಾಗಿದ್ದು, ವಿವಾಹ ನೋಂದಣಿ ಕಚೇರಿಗೆ ಆಗಮಿಸಿದ್ದ ಸಂದರ್ಭದಲ್ಲಿ ವಿಷಯ ತಿಳಿದು ಸ್ಥಳಕ್ಕೆ ಬಂದ ಯುವತಿಯ ಪೋಷಕರು ರಂಪಾಟ ಮಾಡಿದ್ದಾರೆ. ಇದರಿಂದ ಕಂಗಾಲಾದ ಯುವಕ ಪರಾರಿಯಾಗಿದ್ದಾನೆ. ಅಪ್ರಾಪ್ತೆಯನ್ನು ಪೊಲೀಸರು ವಿಚಾರಣೆ ಮಾಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...