alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಫೈಟ್

ಬೆಳಗಾವಿ: ಕಲಬುರಗಿಯಲ್ಲಿ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿಗಳ ನಡುವೆ ಜಗಳ ನಡೆದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಅಂತಹುದೇ ಘಟನೆ ನಡೆದಿದೆ. ಚುನಾವಣೆ ಸಮೀಪಿಸುತ್ತಿರುವಂತೆಯೇ ಆಕಾಂಕ್ಷಿಗಳ ಪೈಪೋಟಿ ಹೆಚ್ಚಾಗಿದೆ.

ಬೆಳಗಾವಿಯಲ್ಲಿ ಬಿ.ಜೆ.ಪಿ. ಬೂತ್ ಮಟ್ಟದ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ನಡುವೆ ಹೊಡೆದಾಟ ನಡೆದಿದೆ. ರಾಮನಾಥ ಮಂಗಲ ಮಂಟಪದಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಸಭೆಯಲ್ಲಿ ಮಾಜಿ ಶಾಸಕ ಅಭಯ್ ಪಾಟೀಲ್ ಬೆಂಬಲಿಗರು ಪಾಂಡುರಂಗ ದೋತ್ರೆ, ಸುನಿಲ್ ಚೌಗಲೆ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಬೆಳಗಾವಿ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಈ ಜಗಳ ಆರಂಭವಾಗಿದ್ದು, ಬಳಿಕ ಅದು ವಿಕೋಪಕ್ಕೆ ತಿರುಗಿ ಸುನಿಲ್ ಮತ್ತು ಪಾಂಡುರಂಗ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿದೆ. ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...